alex Certify GOOD NEWS : ಮಹಾಕುಂಭಮೇಳಕ್ಕೆ ತೆರಳಲು ಶಿವಮೊಗ್ಗದಿಂದ ವಿಶೇಷ ರೈಲು ಸಂಚಾರ, ಇಲ್ಲಿದೆ ವೇಳಾಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಮಹಾಕುಂಭಮೇಳಕ್ಕೆ ತೆರಳಲು ಶಿವಮೊಗ್ಗದಿಂದ ವಿಶೇಷ ರೈಲು ಸಂಚಾರ, ಇಲ್ಲಿದೆ ವೇಳಾಪಟ್ಟಿ

ಶಿವಮೊಗ್ಗ : ಕುಂಭ ಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿಯು ಶಿವಮೊಗ್ಗ ಟೌನ್ – ಬನಾರಸ್ ನಡುವೆ ಒಂದು ಟ್ರಿಪ್ಗೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06223 ಶಿವಮೊಗ್ಗ ಟೌನ್ – ಬನಾರಸ್ ವಿಶೇಷ ಎಕ್ಸಪ್ರೆಸ್ ರೈಲು ಶಿವಮೊಗ್ಗ ಟೌನ್ನಿಂದ ಫೆಬ್ರವರಿ 22, 2025 ರಂದು ಸಂಜೆ 4:40 ಕ್ಕೆ ಹೊರಟು, ಫೆಬ್ರವರಿ 24, 2025 ರಂದು ಮಧ್ಯಾಹ್ನ 3:00 ಗಂಟೆಗೆ ಬನಾರಸ್ ತಲುಪಲಿದೆ.

ಹಿಂತಿರುಗುವ ಪ್ರಯಾಣ, ರೈಲು ಸಂಖ್ಯೆ 06224 ಬನಾರಸ್ – ಶಿವಮೊಗ್ಗ ಟೌನ್ ವಿಶೇಷ ಎಕ್ಸ್ಪ್ರೆಸ್ ರೈಲು ಬನಾರಸ್ನಿಂದ ಫೆಬ್ರವರಿ 25, 2025 ರಂದು ಬೆಳಗಿನ ಜಾವ 1:30 ಕ್ಕೆ ಹೊರಟು, ಫೆಬ್ರವರಿ 27, 2025 ರಂದು ಬೆಳಿಗ್ಗೆ 6:45 ಕ್ಕೆ ಶಿವಮೊಗ್ಗ ಟೌನ್ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಭದ್ರಾವತಿ, ಬಿರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ಹೊಸಪೇಟೆ, ಕೊಪ್ಪಳ, ಗದಗ, ಹೋಳೆ ಆಲೂರು, ಬದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿ ರೋಡ್, ವಿಜಯಪುರ, ಇಂಡಿ ರೋಡ್, ಸೋಲಾಪುರ, ದೌಂಡ್, ಕೊಪರಗಾಂವ್, ಮನ್ಮಾಡ್, ಭುಸಾವಲ್, ಇಟಾರ್ಸಿ, ಪಿಪರಿಯಾ, ನರಸಿಂಗ್ಪುರ್, ಜಬಲ್ಪುರ್, ಕಟ್ಟಿ, ಮೈಹಾರ್, ಸಲ್ಮಾ, ಮಾಣಿಕ್ಪುರ್, ಪ್ರಯಾಗ್ರಾಜ್ ಚಿಯೋಕಿ ಮತ್ತು ಮಿರ್ಜಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ವಿಶೇಷ ರೈಲುಗಳು ಹನ್ನೊಂದು ಎಸಿ ತ್ರಿ-ಟೈರ್ ಬೋಗಿಗಳು, ನಾಲ್ಕು ಸ್ವೀಪರ್ ಕ್ಲಾಸ್ ಬೋಗಿಗಳು, ಎರಡು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್/ಜನರೇಟರ್/ಬ್ರೇಕ್ ವ್ಯಾನ್ಗಳನ್ನು ಒಳಗೊಂಡಿರುತ್ತವೆ.

ಈ ರೈಲುಗಳ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...