alex Certify GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ

ಬೆಂಗಳೂರು : 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ * 1,275 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಭೂಮಿ, ನೀರು, ವಿದ್ಯುತ್ ಪೂರೈಕೆ ಸೇರಿ ಇತರೆ ಮೂಲಸೌಕರ್ಯಗಳಿಗೆ ಅನುಮೋದನೆ ನೀಡಿದೆ. ಮುಂದಿನ 3 ವರ್ಷಗಳಲ್ಲಿ ಎಲ್ಲ ಯೋಜನೆಗಳೂ ಅನುಷ್ಠಾನಗೊಳ್ಳಲಿವೆ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಲಿದೆ ಎಂದು ಅವರು ಹೇಳಿದರು.
ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ ಒಡಂಬಡಿಕೆಗಳ ಪೈಕಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದ್ದು, ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ಅವರು ಹೇಳಿದರು.

ಸರ್ಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇಕಡಾ 100 ರಷ್ಟು ಮತ್ತು ಒಟ್ಟಾರೆಯಾಗಿ ಶೇಕಡಾ 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ ನಿಯಮ ರೂಪಿಸಲಾಗಿದೆ ಎಂದು ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...