ಬೆಂಗಳೂರು : ಅರಣ್ಯ ಇಲಾಖೆಯಲ್ಲಿ 800 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಇಂದು ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳ ಪೈಕಿ 800 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. ಉಳಿದ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ. ಈ ಬಗ್ಗೆ ಕಾನೂನಿನ ಜ್ಞಾನದ ಅರಿವು ಇರುವುದಿಲ್ಲ ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ . ಸರ್ಕಾರದಿಂದ ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.