ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ‘ಒಟ್ಟು 14,600 ಪೌರ ಕಾರ್ಮಿಕರನ್ನು ಕಾಯಂ ಪೌರಕಾರ್ಮಿಕರನ್ನಾಗಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ನೇಮಕಾತಿ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಈಗಾಗಲೇ ನಾವು ಪೌರ ಕಾರ್ಮಿಕರ ಜೊತೆ ಮಾತನಾಡಿದ್ದೇವೆ, ಅವರು ಕೂಡ ಪ್ರತಿಭಟನೆ ಹಿಂಪಡೆಯಲಿದ್ದೇವೆ’ ಎಂದು ಹೇಳಿದ್ದಾರೆ ಎಂದರು.
ಸೇವೆ ಕಾಯಂ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸೆಪ್ಟೆಂಬರ್ 11ರಿಂದ ರಾಜ್ಯಾದ್ಯಂತ ಗುತ್ತಿಗೆ ಪೌರಕಾರ್ಮಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಸ್ವಚ್ಛತಾ ಕಾರ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ನೂತನ ಸರ್ಕಾರ ರಚನೆಯಾಗಿ 100 ದಿನ ಪೂರ್ಣಗೊಂಡರೂ, ಪೌರಕಾರ್ಮಿಕರ ಕಾಯಂಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಿಂದ ಗುತ್ತಿಗೆ ಪೌರಕಾರ್ಮಿಕರು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಸರ್ಕಾರ ಭರವಸೆ ನೀಡಿದ ಬಳಿಕ ಕಾರ್ಮಿಕರು ಪ್ರತಿಭಟನೆ ಹಿಂಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.