ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯದಲ್ಲಿ ಶೀಘ್ರವೇ 750 ಭೂಮಾಪಕ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ 750 ಭೂಮಾಪಕ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡುವಂತೆ ಕರ್ನಾಟಕ ಲೋಕಸಭಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.