alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ವೇತನಕ್ಕೆ ಇ-ಕೆವೈಸಿ ಕಡ್ಡಾಯ, ಉಚಿತ ನೋಂದಣಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ವೇತನಕ್ಕೆ ಇ-ಕೆವೈಸಿ ಕಡ್ಡಾಯ, ಉಚಿತ ನೋಂದಣಿಗೆ ಅವಕಾಶ

2024-25ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ಇ-ದೃಢೀಕರಣ ಪಡೆಯಲಾಗುತ್ತಿದೆ.

ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಇ-ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ. ಇಲ್ಲವಾದಲ್ಲಿ ಕೇಂದ್ರ ಸರ್ಕಾರದಿಂದ ಬರುವ ಶೇ.60 ರಷ್ಟು ವಿದ್ಯಾರ್ಥಿವೇತನ ಮಂಜೂರಾಗುವುದಿಲ್ಲ ಎಂದು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...