ಬೆಂಗಳೂರು : ಇನ್ಮುಂದೆ ಶನಿವಾರ, ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದ್ದು, ಅಕ್ಟೋಬರ್ 21ರಿಂದ ಜಾರಿಗೆ ಬರಲಿದೆ.
ರಾಜ್ಯದಲ್ಲಿ ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರವೂ ಸ್ವತ್ತುಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ಬೆಂಗಳೂರಿನ ಐದು ಉಪನೋಂದಣಿ ಕಚೇರಿಗಳು ಸೇರಿ ರಾಜ್ಯದ 35 ಉಪನೋಂದಣಿ ಕಚೇರಿಗಳಲ್ಲಿ ಈ ಸೌಲಭ್ಯ ಸಿಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.