alex Certify ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಯೋಜನೆಗಳಿಗೆ ಉತ್ತಮ ಸ್ಪಂದನೆ : ಸಚಿವ ಸಂತೋಷ್ ಲಾಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಯೋಜನೆಗಳಿಗೆ ಉತ್ತಮ ಸ್ಪಂದನೆ : ಸಚಿವ ಸಂತೋಷ್ ಲಾಡ್

ಧಾರವಾಡ :  ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ ಮಾತನಾಡಿದರು.

ರಾಜ್ಯ ಸರಕಾರವು ನುಡಿದಂತೆ ನಡೆದಿದ್ದು, ಜನಪರ ಗ್ಯಾರೆಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ  ಯೋಜನೆಗಳನ್ನು ಅನುμÁ್ಠನಗೊಳಿಸಲಾಗುತ್ತಿದೆ.

ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದೆ. ಬಡ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ. ಶಕ್ತಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 1.51 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುತ್ತಾರೆ. ರೂ. 30.77 ಕೋಟಿ ಮೌಲ್ಯದ ಸೌಲಭ್ಯವನ್ನು ಪಡೆದಿರುತ್ತಾರೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಒಡತಿಗೆ ಮಾಹೆಯಾನ ರೂ.2,000/- ನೀಡುವ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಿರುತ್ತದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 3,82,523 ಮಹಿಳೆಯರು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲಿದ್ದಾರೆ.

ಗೃಹಜ್ಯೋತಿ ಯೋಜನೆ ಅಡಿಯಲ್ಲಿ ವಿದ್ಯುತ್ ಬಳಕೆದಾರರಿಗೆ ಗರಿಷ್ಟ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 5,44,181 ಗೃಹ ಬಳಕೆದಾರರಿದ್ದು, ಇದರಲ್ಲಿ 4,18,250 ಗ್ರಾಹಕರು ಈಗಾಗಲೇ ಪ್ರಯೋಜನ ಪಡೆದುಕೊಂಡಿರುತ್ತಾರೆ. ಯುವನಿಧಿ ಯೋಜನೆಯನ್ನು ಸದ್ಯದಲ್ಲಿಯೇ ಜಾರಿಗೊಳಿಸಲಾಗುವುದು.

ಅನ್ನಭಾಗ್ಯ ಯೋಜನೆಯಡಿ ಯಾರೂ ಸಹ ಹಸಿವಿನಿಂದ ಬಳಲದಂತೆ ಕಾರ್ಯಕ್ರಮವನ್ನು ರೂಪಿಸಲಾಗಿದೆ.  ಧಾರವಾಡ ಜಿಲ್ಲೆಯಲ್ಲಿ 3,87,124 ಬಿ.ಪಿ.ಎಲ್. ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸಲಾಗಿದೆ. ಬಿ.ಪಿ.ಎಲ್. ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ರೂ.170/- ಗಳಂತೆ ರೂ.16.67 ಕೋಟಿಯನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಭಾರತವು ಕಳೆದ 77 ವರ್ಷಗಳಲ್ಲಿ ಅಗಾಧವಾಗಿ ಬೆಳೆದಿದೆ. ಪಕ್ಷಾತೀತವಾಗಿ ನಮ್ಮ ಎಲ್ಲ ಹಿರಿಯ ನಾಯಕರು ಮತ್ತು ಮುಖ್ಯಸ್ಥರು ದೇಶವನ್ನು ಅಭಿವೃದ್ಧಿಗಾಗಿ ಮುನ್ನಡೆಸಿದ್ದಾರೆ. ಭಾರತವು ಈಗ ಜಗತ್ತಿನ 5ನೇ ಬಲಿಷ್ಠ ರಾಷ್ಟ್ರವಾಗಿದೆ. ಯುವಕರು ದೇಶ ಸೇವೆಗೆ ಮುಂದಾಳತ್ವ ವಹಿಸಬೇಕು. ರಾಜಕೀಯವನ್ನು ಸೇರುವ ಮೂಲಕ ದೇಶದ ಅಭಿವೃದ್ಧಿಗೆ ಮತ್ತು ಸಮರ್ಥ ನಾಯಕತ್ವಕ್ಕೆ ಮುಂದಾಗಬೇಕೆಂದು ಸಚಿವರು ಯುವ ಸಮೂಹಕ್ಕೆ ಕರೆ ನೀಡಿದರು.

ಜಿಲ್ಲೆಯ ಕಾರ್ಯಕ್ರಮಗಳು: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.  2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.57 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 1.57 ಲಕ್ಷ ಹೆಕ್ಟೇರ್‍ಗಳಷ್ಟು ಬಿತ್ತನೆಯಾಗಿದೆ. 1.1.2023 ರಿಂದ 2.8.2023 ರವರೆಗೆ 415 ಮಿ.ಮೀ. ವಾಡಿಕೆ ಮಳೆಗೆ 391 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 11,300 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ.  ಹಾಗೂ 35,807 ಮೆ.ಟನ್‍ಗಳಷ್ಟು ವಿವಿಧ ರಸಗೊಬ್ಬರಗಳನ್ನು ಪೂರೈಸಲಾಗಿದೆ ಎಂದು ಹೇಳಿದರು.

ಜನಪ್ರಿಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ತಾವು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಮುಖಾಂತರ ನಾಡಿನ ಜನತೆಗೆ ಕಳೆದ 3 ತಿಂಗಳಲ್ಲಿ ಸ್ಪಷ್ಟಪಡಿಸಿ ರಾಜ್ಯದ ಜನತೆಯ ಪ್ರೀತಿ ಗಳಿಸಿರುತ್ತಾರೆ. ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ವರ್ಗದ ಬಡ ಜನರಿಗೆ ಭದ್ರತೆಯನ್ನು ಒದಗಿಸಲು ಸರ್ಕಾರ ಸದಾ ಬದ್ಧವಾಗಿದೆ ಹಾಗೂ ಜನರ ನಿರೀಕ್ಷೆಯಂತೆ ನುಡಿದಂತೆ ನಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.

ದೇಶಕ್ಕೆ ಶಾಂತಿ ಹಾಗೂ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ಹಾಗೂ ರಾಷ್ಟ್ರೀಯ ಹೋರಾಟದಲ್ಲಿ ದುಡಿದ ಮತ್ತು ಮಡಿದ ಮಹಾನುಭಾವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳೋಣ. ಕರೆಗೆ ಓಗೊಟ್ಟು ಸಮಾರಂಭದಲ್ಲಿ ಭಾಗವಹಿಸಿರುವ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಗಣ್ಯ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಸಲಹೆ ಹಾಗೂ ಸಹಕಾರವನ್ನು ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...