ಬೆಳಗಾವಿ: ಬೆಳಗಾವಿಯ ಖಂಜರ ಗಲ್ಲಿಯಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಜಾಹಿದ್ ಡಾಂಗೆ ಎಂಬುವರಿಗೆ ಸೇರಿದ ಗೋದಾಮಿಗೆ ಬೆಂಕಿ ತಗುಲಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.