ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲಾ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ, ಅನುದಾನಿತ ಪ್ರೌಢಶಾಲಾ ಹಾಗೂ ಪಿಯು ಕಾಲೇಜುಗಳಲ್ಲಿ 2008ರ ಪೂರ್ವದಲ್ಲಿ ನೇಮಕಗೊಂಡ ಶಿಕ್ಷಕರು, ಉಪನ್ಯಾಸಕರಿಗೆ ವಿಶೇಷ ಭತ್ಯೆ ಸೌಲಭ್ಯ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
6ನೇ ವೇತನ ಆಯೋಗದ ಶಿಫಾರಿಸಿನ ಆಧಾರದಲ್ಲಿ ಪ್ರೌಢಶಾಲಾ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ವಿಶೇಷ ಭತ್ಯೆ ಕಲ್ಪಿಸುವ ಕುರಿತಂತೆ ಹೈಕೋರ್ಟ್ ಪರವಾಗಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ ಶಿಕ್ಷಣ ಇಲಾಖೆಯು ಅದೇಶ ಹೊರಡಿಸಿದೆ.
ಈ ಆದೇಶದಿಂದ ಪಿಯು ಇಲಾಖೆಯಲ್ಲಿ 12,853 ಉಪನ್ಯಾಸಕರ ಪೈಕಿ 4,985 ಉಪನ್ಯಾಸಕರು ಫಲಾನುಭವಿಗಳಾಗಲಿದ್ದಾರೆ. ಪ್ರೌಢಶಾಲೆಯಲ್ಲಿ 1 ಸಾವಿರಕ್ಕಿಂತ ಹೆಚ್ಚು ಶಿಕ್ಷಕರು ವಿಶೇಷ ಭತ್ಯೆಯ ಲಾಭ ಪಡೆಯಲಿದ್ದಾರೆ ಎನ್ನಲಾಗಿದೆ.