
ಇದರ ಮಧ್ಯೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಸ್ಪೋಟಕ ಮಾಹಿತಿಯೊಂದನ್ನು ಅವರು ಹಂಚಿಕೊಂಡಿದ್ದು, ಬಿಜೆಪಿ ಸೇರ್ಪಡೆಗೊಂಡರೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಕ್ಲೋಸ್ ಮಾಡಲಾಗುತ್ತದೆ ಎಂಬ ಆಫರ್ ತಮಗೆ ನೀಡಲಾಗಿತ್ತು ಎಂದಿದ್ದಾರೆ.
ಆದರೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರ್ಪಡೆಗೊಳ್ಳುವುದಿಲ್ಲ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಸುಳ್ಳು ಎಂದಿರುವ ಅವರು, ನನ್ನ ತಲೆ ಕತ್ತರಿಸಿಕೊಳ್ಳಲು ಸಿದ್ಧನಿದ್ದೇನೆ ಹೊರತು ಭ್ರಷ್ಟರ ಜೊತೆ ಕೈಜೋಡಿಸುವುದಿಲ್ಲ ಎಂದಿದ್ದಾರೆ.