ಬೆಂಗಳೂರಿನಲ್ಲಿ ಇಂದು 74ನೇ ಗಣರಾಜ್ಯೋತ್ಸವ ಆಚರಿಸಲಾಗುವುದು. ಎಂಜಿ ರಸ್ತೆಯ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ.
ಬೆಳಗ್ಗೆ 8:58ಕ್ಕೆ ರಾಜ್ಯಪಾಲ ಗೆಹ್ಲೊಟ್ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ನಾಡಿನ ಜನತೆಗೆ ರಾಜ್ಯಪಾಲರು ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.
ಪಥ ಸಂಚಲನದಲ್ಲಿ ಪೊಲೀಸರು, ಸ್ಕೌಟ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸುವರು. 38 ತುಕಡಿಗಳಲ್ಲಿ ಸುಮಾರು 1,520 ಮಂದಿ ಭಾಗವಹಿಸಲಿದ್ದಾರೆ. ಸುಮಾರು 2000 ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ರಾಜ್ಯಪಾಲರು ಬಹುಮಾನ ವಿತರಿಸಲಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.