ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜುಗಳ ಕಟ್ಟಡ, ಕೊಠಡಿ ಸೇರಿ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ.
ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಶೇಕಡ 60ರಷ್ಟು, ರಾಜ್ಯ ಸರ್ಕಾರ ಶೇಕಡ 40ರಷ್ಟು ಮೊತ್ತ ಭರಿಸಲಿವೆ. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತೀಚೆಗೆ ದೆಹಲಿಗೆ ತೆರಳಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಈಗಾಗಲೇ ಸಲ್ಲಿಸಿದ ಪ್ರಸ್ತಾವನೆಗೆ ಒಪ್ಪಿಗೆ ನೀಡಲು ಮನವಿ ಮಾಡಿದ್ದರು.
ಈ ಸಂಬಂಧ 284 ಕೋಟಿ ರೂ. ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಈ ಅನುದಾನದಲ್ಲಿ ರಾಜ್ಯದಲ್ಲಿ 27 ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಶಾಲೆ, ಕಾಲೇಜುಗಳ ಕಟ್ಟಡ, ಕೊಠಡಿ, ಲೈಬ್ರರಿ ಸೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಶಾಲೆ, ಕಾಲೇಜುಗಳ ಅಭಿವೃದ್ಧಿಪಡಿಸಲಾಗುವುದು.