ಬೆಂಗಳೂರು: ವಿಶ್ವವಿದ್ಯಾಲಯಗಳ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 2.5 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೇ ಘೋಷಿಸಲಾಗಿದ್ದು, ನಿರಂತರವಾಗಿ ಈ ಬಗ್ಗೆ ಸಭೆ ನಡೆಸುತ್ತಿದ್ದು, ಶೀಘ್ರವೇ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.