ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮರಣ ಸಂಭವಿಸಿದಾಗ ‘ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ’ ನಮೂನೆ 4/4ಎ ನಲ್ಲಿ ದಾಖಲಿಸಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳಿಂದ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಜನನ ಮರಣಗಳ ನೋಂದಣಿ ಅಧಿನಿಯಮದ ಪ್ರಕಾರ ಎಲ್ಲಾ ವೈದ್ಯರು, ವೈದ್ಯ ವೃತ್ತಿಪರರು ಚಿಕಿತ್ಸೆ ನೀಡಿ ಮೃತಪಟ್ಟ ವ್ಯಕ್ತಿಯ ಮರಣದ ಕಾರಣವನ್ನು ‘ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ’ದಲ್ಲಿ ಎಲ್ಲಾ ಮಾಹಿತಿ ಭರ್ತಿ ಮಾಡಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.
ಮರಣ ಕಾರಣಗಳ ಸಂಗ್ರಹಣೆ ಮತ್ತು ವಿಶ್ಲೇಷಣೆಯ ಮಾಹಿತಿ ಹಿನ್ನೆಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೂ ಇ- ಜನ್ಮ ತಂತ್ರಾಂಶದಲ್ಲಿ ಮರಣ ಘಟನೆಯ ಮಾಹಿತಿ ದಾಖಲಿಸಲು ಯೂಸರ್ ಐಡಿ ಮತ್ತು ಪಾಸ್ವರ್ಡ್ ನೀಡಲು ಕ್ರಮವಹಿಸುವಂತೆ ಸೂಚಿಸಲಾಗಿದೆ.