ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಿದೆ.
ಸರ್ಕಾರದ ನೀತಿ ನಿರ್ಣಯದ ಅನ್ವಯ 7ನೇ ವೇತನ ಆಯೋಗದ ಅಂತಿಮ ವರದಿ ಕಾಯ್ದಿರಿಸಿ ಮಾರ್ಚ್ 1ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲವೇತನ, ಮೂಲ ಪಿಂಚಣಿಯ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಇದರಿಂದ ಉಂಟಾಗುವ ಹೆಚ್ಚುವರಿ ಆರ್ಥಿಕ ಹೊರೆಯನ್ನು ಅನ್ವಯಿಸುವ ಸಂಸ್ಥೆಗಳ ಸ್ವಂತ ಸಂಪನ್ಮೂಲಗಳಿಂದ ಭರಿಸಲು ಸೂಚಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಿದ ಶೇಕಡ 17ರಷ್ಟು ತಾತ್ಕಾಲಿಕ ಪರಿಹಾರ ಸ್ಥಳೀಯ ಸಂಸ್ಥೆ, ವಿವಿ, ನಗರ ಸ್ಥಳೀಯ ಸಂಸ್ಥೆ ನೌಕರರಿಗೂ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.