alex Certify ‘ಆತ್ಮಹತ್ಯೆ ತಡೆ’ಯಲು ಸರ್ಕಾರದ ಮಹತ್ವದ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆತ್ಮಹತ್ಯೆ ತಡೆ’ಯಲು ಸರ್ಕಾರದ ಮಹತ್ವದ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ನಿಮ್ಹಾನ್ಸ್ ಸಹಯೋಗದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಬಗ್ಗೆ ನೀತಿ ರೂಪಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಮಂಗಳವಾರ ನಿಮ್ಹಾನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಆತ್ಮಹತ್ಯೆ ತಡೆಗಟ್ಟುವಿಕೆ ಕೇಂದ್ರ(ಎನ್-ಸ್ಪೈರ್ಟ್) ಉದ್ಘಾಟಿಸಿ ಅವರು ಮಾತನಾಡಿದರು.

ಒತ್ತಡ, ಖಿನ್ನತೆ, ದುಶ್ಚಟ ಸೇರಿ ವಿವಿಧ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ನಿಮ್ಹಾನ್ಸ್ ಸಹಯೋಗದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ನೀತಿಯನ್ನು ಸಹ ರೂಪಿಸುತ್ತಿದೆ ಎಂದರು.

ನಿಮ್ಹಾನ್ಸ್ ಸಂಸ್ಥೆ ಕೇಂದ್ರ ಸರ್ಕಾರದ ಸಂಸ್ಥೆ ಆದರೂ ರಾಜ್ಯ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ನಾವೆಲ್ಲರೂ ನಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸವಾಲುಗಳನ್ನು ಎದುರಿಸುತ್ತೇವೆ. ಈ ಹೋರಾಟಗಳು ಕೆಲವೊಮ್ಮೆ ಭರವಸೆಯ ನಷ್ಟಕ್ಕೆ ಕಾರಣವಾಗಬಹುದು. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಸಹಾನುಭೂತಿಯಿಂದ ಪರಿಹರಿಸುವುದು ಮತ್ತು ಆತ್ಮಹತ್ಯಾ ಆಲೋಚನೆಗಳೊಂದಿಗೆ ಹೋರಾಡುವ ಮತ್ತು ಹತಾಶೆಯ ಕ್ಷಣಗಳನ್ನು ಜಯಿಸುವ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಮೊದಲಾದವರು ಇದ್ದರು.

ಬೆಂಗಳೂರಿನಲ್ಲಿ N-SPRITE (NIMHANS – ಆತ್ಮಹತ್ಯೆ ತಡೆಗಟ್ಟುವಿಕೆ, ಸಂಶೋಧನೆ, ಅನುಷ್ಠಾನ ಮತ್ತು ತರಬೇತಿ ತೊಡಗಿಸಿಕೊಳ್ಳುವಿಕೆ) ಪ್ರಾರಂಭಿಸಲಾಗಿದ್ದು, ಈ ಕೇಂದ್ರವು ಸ್ವಯಂ-ಹಾನಿ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ತರಬೇತಿ ಸಾಮರ್ಥ್ಯಗಳನ್ನು ನಿರ್ಮಿಸಲು, ಬಲಪಡಿಸಲು ಮತ್ತು ಉಳಿಸಿಕೊಳ್ಳಲು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...