alex Certify ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ತಡೆಗೆ ಸರ್ಕಾರದ ಮಹತ್ವದ ಕ್ರಮ: ಸಪ್ತ ಸಚಿವರ ಟಾಸ್ಕ್ ಫೋರ್ಸ್ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ತಡೆಗೆ ಸರ್ಕಾರದ ಮಹತ್ವದ ಕ್ರಮ: ಸಪ್ತ ಸಚಿವರ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ತಡೆಗಟ್ಟಲು ರಾಜ್ಯ ಸರ್ಕಾರ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದೆ.

7 ಸಚಿವರನ್ನು ಒಳಗೊಂಡ ಟ್ರಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನುಳಿದ ಆರು ಸಚಿವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಡಾ. ಶರಣ ಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್ ಸಮಿತಿಯ ಸದಸ್ಯರಾಗಿದ್ದಾರೆ.

ಸಂಬಂಧಿಸಿದ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...