ಕಲ್ಯಾಣ ಕರ್ನಾಟಕ ಶಾಲಾ ಮಕ್ಕಳು ಸೇರಿ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ವಸತಿ ಶಾಲೆ / ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಮತ್ತು KREIS ವಸತಿ ಶಾಲೆ / ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ 32.95 ಕೋಟಿ ರೂ. ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು ಪೌಷ್ಠಿಕಾಂಶದ ಪುಡಿಯನ್ನು ಖರೀದಿಸಿ, ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ ಒದಗಿಸುವ ಪ್ರಸ್ತಾವನೆಗೆ ಸಮ್ಮತಿ ನೀಡಲಾಗಿದೆ.

2,500 ಕೋಟಿ ರೂ. ವೆಚ್ಚದಲ್ಲಿ ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ತೀರ್ಮಾನ ಕೈಗೊಳ್ಳಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯ‌ರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟಿಕ್ ಹೀಟ್ ಪಂಪ್‌ಗಳನ್ನು 42 ಕೋಟಿ ರೂ. ವೆಚ್ಚದಲ್ಲಿ ಪೂರೈಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read