ಬೆಂಗಳೂರು: ಅಲ್ಪಸಂಖ್ಯಾತರ ಪರ ಸರ್ಕಾರ ಮತ್ತೊಂದು ನಿರ್ಣಯ ಕೈಗೊಂಡಿದೆ. ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಶಿಕ್ಷಣ ಸಂಸ್ಥೆಗೆ ಮಾನ್ಯತೆ ನೀಡಲು ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗಲಿರುವ ವಿಧೇಯಕ ಇದಾಗಿದೆ. ನಿಗದಿತ ವಿದ್ಯಾರ್ಥಿಗಳ ಪ್ರವೇಶಾತಿಗೆ ಷರತ್ತು ಇರುವುದಿಲ್ಲ. ಕಡಿಮೆ ವಿದ್ಯಾರ್ಥಿಗಳು ಇದ್ದರೂ ಆ ಕಾಲೇಜಿನ ಮಾನ್ಯತೆ ಮುಂದುವರೆಯಲಿದೆ.
ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಈ ಹಿಂದೆ ನಿಗದಿಯಾಗಿದ್ದ ಮೈನಾರಿಟಿ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ನಿಗದಿಯಾಗಿತ್ತು. ವಿದ್ಯಾರ್ಥಿಗಳ ಪ್ರವೇಶಾತಿ ಪ್ರಾಥಮಿಕ ಶಾಲೆಗಳಲ್ಲಿ ಶೇಕಡ 25ರಷ್ಟು ಅಲ್ಪಸಂಖ್ಯಾತ ಮಕ್ಕಳು ಇರಬೇಕಿತ್ತು. ಪ್ರೌಢಶಾಲೆಯಲ್ಲಿ ಶೇಕಡ 50ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕಿತ್ತು. ನೂತನ ವಿಧೇಯಕದ ಪ್ರಕಾರ ಇನ್ನು ಮುಂದೆ ಇಂತಹ ನಿಬಂಧನೆ ಇರುವುದಿಲ್ಲ ಎಂದು ಹೇಳಲಾಗಿದೆ.