ವಿಜಯಪುರ: ಸಹಕಾರಿ ಸಂಸ್ಥೆಗಳು ಸದೃಢವಾದರೆ ಜನರ ಸಾಮಾಜಿಕ, ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸೋಮವಾರ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ, ಸಹಕಾರ ರತ್ನ ಪ್ರಶಸ್ತಿ ಪ್ರದಾನ, ಡಿಸಿಸಿ ಬ್ಯಾಂಕ್ ನ ಶತಮಾನೋತ್ಸವ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳ ಬದಲಿಗೆ ಸಹಕಾರಿ ಬ್ಯಾಂಕುಗಳಲ್ಲಿ ಹಣ ಠೇವಣಿ ಇಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲಾಗುವುದು. ರಾಜ್ಯದಲ್ಲಿ 45,500, ದೇಶದಲ್ಲಿ 8.50 ಲಕ್ಷ ಸೊಸೈಟಿಗಳಿವೆ. ದೇಶದ ಜಿಡಿಪಿ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ. ಯಾವುದೇ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಸಹಕಾರ ರಂಗ ಹೆಚ್ಚು ಬಲಿಷ್ಠವಾಗಬೇಕು. ಈ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಸರ್ಕಾರದ ಹಣ ಠೇವಣಿ ಇಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.