
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು.
ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗ ವರದಿಯನ್ನು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಕ್ಷಣಗಣನೆ ಶುರುವಾಗಿರುವ ಸಂದರ್ಭದಲ್ಲೇ ವೇತನ ಆಯೋಗ ವರದಿ ಸಲ್ಲಿಕೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ಕಾವೇರಿ ನಿವಾಸದಲ್ಲಿ ಭೇಟಿ ಮಾಡಲಿರುವ ನಿಯೋಗ ವರದಿ ಸಲ್ಲಿಸಲಿದೆ.