ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶೀಘ್ರವೇ ವರದಿ ಸಲ್ಲಿಸುವಂತೆ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ. ಏಳನೇ ವೇತನ ಆಯೋಗ ರಚನೆಯಾಗಿ 14 ತಿಂಗಳು ಕಳೆದಿದ್ದು, ವರದಿ ಸಲ್ಲಿಕೆ ವಿಳಂಬವಾಗಿದೆ. ವೇತನ ಆಯೋಗದ ಅನುಷ್ಠಾನದ ಬಗ್ಗೆ ನೌಕರರಲ್ಲಿಯೂ ಆತಂಕ ಇದೆ. ಮಾರ್ಚ್ ನಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ತಡ ಮಾಡದೆ ವರದಿ ನೀಡಬೇಕು ಎಂದು ನೌಕರರ ನಿಯೋಗ ಒತ್ತಾಯಿಸಿದೆ.
ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಆಯೋಗದ ಸದಸ್ಯರಾದ ರಾಮಮೂರ್ತಿ, ಶ್ರೀಕಾಂತ ವನವಳ್ಳಿ, ಸದಸ್ಯ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಇದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿ ತೆರಳಿದ್ದರು.