alex Certify ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಈ ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು ಕೋಲಾರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮುಂದೆ ಕರ್ತವ್ಯಕ್ಕೆ ಹಾಜರಾಗುವವರೆಗೆ ಅವರ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಬೇಕು ಎಂದು ಬಿ. ಗಂಗಾಧರ ಮನವಿ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...