ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅ. 16 ರಿಂದ 24 ರವರೆಗೆ ತೆರಿಗೆ ವಿನಾಯಿತಿ ನೀಡಿ ಆದೇಶ ನೀಡಲಾಗಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಜಲಾಶಯ, ಮೈಸೂರು ವೀಕ್ಷಿಸಲು ಹೊರ ರಾಜ್ಯಗಳಿಂದ ಬರುವ ಕರ್ನಾಟಕ ಹೊರೆತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ, ಆ ರಾಜ್ಯಗಳಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.