
ಬೆಂಗಳೂರು: ರಾಜ್ಯ ಸರ್ಕಾರ ತೊಗರಿ ಬೆಂಬಲ ಬೆಲೆಯನ್ನು 450 ರೂ. ಹೆಚ್ಚಳ ಮಾಡುವ ಮೂಲಕ ರೈತರ ನೆರವಿಗೆ ಮುಂದಾಗಿದೆ.
ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ಕ್ವಿಂಟಲ್ ಗೆ 450 ರೂ. ಹೆಚ್ಚುವರಿ ದರದಲ್ಲಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ 7500 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಿದ್ದು, ಇದಕ್ಕೆ ರಾಜ್ಯ ಸರ್ಕಾರ 450 ರೂಪಾಯಿ ಸೇರಿಸಿ ಒಟ್ಟು 8,000 ರೂ. ದರದಲ್ಲಿ ತೊಗರಿ ಖರೀದಿಸಲಾಗುವುದು.
ಗುರುವಾರ ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಗಳ ತೊಗರಿ ಬೆಳೆಗಾರರಿಗೂ ಸೌಲಭ್ಯ ಸಿಗಲಿದೆ. ಕೇಂದ್ರ ಸರ್ಕಾರ ಪ್ರತಿ ರೈತರಿಂದ 20 ಕ್ವಿಂಟಲ್ ರಾಗಿ ಖರೀದಿಸಲು ಅನುಮೋದನೆ ನೀಡಿದ್ದು, ಇದನ್ನು 30 ಕ್ವಿಂಟಲ್ ಗೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.