ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಸೇರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ 276 ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ.
105 ಗ್ರೂಪ್ ಎ ಹುದ್ದೆಗಳು, 171 ಗ್ರೂಪ್ ಬಿ ವೃಂದಕ್ಕೆ ಸೇರಿದ ಹುದ್ದೆಗಳು ಇವೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಖಾಲಿ ಹುದ್ದೆಗಳ ಮಾಹಿತಿಯನ್ನು ಎಲ್ಲ ಇಲಾಖೆಗಳಿಂದ ಸಂಗ್ರಹಿಸಿದ್ದು, ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರು 41, ಆರ್.ಡಿ.ಪಿ.ಆರ್. ಕಾರ್ಯನಿರ್ವಾಹಕ ಅಧಿಕಾರಿ 20, ಕಂದಾಯ ಇಲಾಖೆ ತಹಶೀಲ್ದಾರ್(ಗ್ರೇಡ್ 2) 6, ವಾಣಿಜ್ಯ ತೆರಿಗೆ ಅಧಿಕಾರಿ 59, ಆರ್ಥಿಕ ಇಲಾಖೆ ಸಹಾಯಕ ಖಜಾನೆ ಅಧಿಕಾರಿ 23 ಸೇರಿ ವಿವಿಧ ಇಲಾಖೆಗಳ 276 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಖಾಲಿ ಇವೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 59 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.