ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ವಿವಾದದ ನಡುವೆ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್ಎಸ್ಎಲ್ ವರದಿಯ ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ರಾಜ್ಯ ಸರಕಾರ ವಿವಾದಿತ ವಿಡಿಯೊದ ಎಫ್ಎಸ್ಎಲ್ ವಿಶ್ಲೇಷಣೆಗೆ ಕಳುಹಿಸಿಕೊಟ್ಟಿದ್ದು, ಅದರ ವರದಿ ಇನ್ನೂ ಬಂದಿಲ್ಲ. ಈಗ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವರದಿ ಅಧಿಕೃತವಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಲು ಖಾಸಗಿಯವರು ಯಾರು? ಅವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಎಂದು ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ‘ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.