ಬೆಂಗಳೂರು: ಹಿಂದಿನ ವರ್ಷದ ವಿದ್ಯಾರ್ಥಿಗಳ ಶುಲ್ಕಗಳಲ್ಲಿ ಉಳಿಸಿಕೊಂಡ ಮೊತ್ತದಲ್ಲಿ ಕಾಲೇಜಿನ ವಿದ್ಯುತ್ ಬಿಲ್, ನೀರಿನ ಶುಲ್ಕ ಪಾವತಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಲ್ಲಿ 2022 -23ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಲು ಮತ್ತು ಇದನ್ನು ಆಯಾ ಕಾಲೇಜುಗಳಲ್ಲಿಯೇ ಉಳಿಸಿಕೊಂಡು ಕಾಲೇಜುಗಳ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುಮೋದನೆ ನೀಡಲಾಗಿದೆ. ಈ ಮೊತ್ತದಲ್ಲಿಯೇ ಕಾಲೇಜಿನ ವಿದ್ಯುತ್ ಶುಲ್ಕ ಮತ್ತು ನೀರಿನ ಬಿಲ್ ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.