ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳ ಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹಾದೇವಪ್ಪ ತಿಳಿಸಿದ್ದಾರೆ.
ಒಳ ಮೀಸಲಾತಿಗೆ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಮಾದಿಗ ಉ ಪಜಾತಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಪಡೆದು ಮೂರು ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ. ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.