ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರತಿದಿನ 10 ನಿಮಿಷ ಧ್ಯಾನ ಮತ್ತು ನೈತಿಕ ಶಿಕ್ಷಣ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚ್ಯಿಸಲಾಗಿದೆ. ಸಮಿತಿಯ ಸದಸ್ಯರಾಗಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಜಿ.ಪಿ. ದ್ವಾರಕನಾಥ್, ಸೋಫಿಯಾ ಪ್ರೌಢಶಾಲೆ ಪ್ರಾಂಶುಪಾಲೆ ಸಿಸ್ಟರ್ ಅಲ್ಲನ ಎಸ್.ಎನ್.ಡಿ., ಬಾಗೇಪಲ್ಲಿ ಪಿಯು ಕಾಲೇಜು ಉಪನ್ಯಾಸಕ ಬಿ. ಅಮೀರ್ ಜಾನ್, ವಿಭು ಅಕಾಡೆಮಿಯ ಡಾ. ವಿ.ಬಿ. ಆರತಿ, ಡ್ರೀಮ್ ಎ ಡ್ರೀಮ್ ಸಿಇಒ ಸುಚೇತಾ ಭಟ್ ಅವರನ್ನು ನೇಮಕ ಮಾಡಲಾಗಿದೆ.