ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ.
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನಿವಾಸ ನವೀಕರಣ ಮತ್ತು ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು, ಈ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿದಾಗ ಸರಿಯಾದ ಉತ್ತರ, ದಾಖಲೆ ನೀಡಿಲ್ಲ.
ಹೀಗಾಗಿ ಇಲಾಖಾ ತನಿಖೆ ನಡೆಸಲು ಸೂಚಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತರಾದ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ.