ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿ ಅಕ್ರಮ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ.
ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಈ ಹಿಂದೆ ಪಿಎಸ್ಐ ನೇಮಕಾತಿ ಅಕ್ರಮದ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗಿದೆ,
ನೇಮಕಾತಿ ನಿಯಮ ಉಲ್ಲಂಘನೆ, ಪರೀಕ್ಷೆಯಲ್ಲಿ ಅಕ್ರಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಲಾಗಿದೆ.