ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವ ಧನವನ್ನು 3,000 ರೂ.ನಿಂದ 6 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಗೌರವ ಧನವನ್ನು 2000 ರೂ.ನಿಂದ 4,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಗ್ರಾಮ ಪಂಚಾಯತಿ ಸದಸ್ಯರ ಗೌರವಧನ 1000 ರೂ.ನಿಂದ 2000 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.