![](https://kannadadunia.com/wp-content/uploads/2019/02/teachers-2-1.jpg)
ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ(HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-1ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಆದರೆ ಪದವೀಧರ ಪ್ರಾಥಮಿಕ ಶಾಲಾ(ಜಿ.ಪಿ.ಟಿ) ಶಿಕ್ಷಕರು ಬಡ್ತಿ ಸಂಬಂಧ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾವೆ ಹೂಡಿದ್ದು ಅರ್ಜಿ ಸಂಖ್ಯೆ: 1134-1143/2022. ರ ನ್ಯಾಯಾಲಯದ ಅಂತಿಮ ತೀರ್ಪಿನಂತೆ ಹಾಗೂ ಉಲ್ಲೇಖಿತ-2ರ ಪುನರ್ ಪರಿಶೀಲನಾ ಅರ್ಜಿ ಸಂಖ್ಯೆ: 196-205/2023 ರ ಆದೇಶದಂತೆ ಮತ್ತು ಉಲ್ಲೇಖ-4 ರಲ್ಲಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ನಿಂದನಾ ದಾವೆ ಸಂಖ್ಯೆ: ಸಿ.ಟಿ.ಎ. 46-55/2024 ದಾಖಲಾಗಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಉಲ್ಲೇಖ-1ರ ವೇಳಾಪಟ್ಟಿಯ ಪ್ರಕಾರ ಮುಖ್ಯ ಶಿಕ್ಷಕರ ಮತ್ತು ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ನೀಡಬೇಕಾಗಿದ್ದ ಬಡ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶವದವರೆಗೂ ಮುಂದೂಡಲಾಗಿದೆ. ಸಕ್ಷಮ ಪ್ರಾಧಿಕಾರಿಗಳು ಇದನ್ನು ಗಮನಿಸಲು ಸೂಚಿಸಿದೆ.
![](https://kannadadunia.com/wp-content/uploads/2024/02/WhatsApp-Image-2024-02-15-at-8.07.21-PM-1.jpeg)