alex Certify ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ʻಮುಖ್ಯ ಶಿಕ್ಷಕʼರ ಹುದ್ದೆಗೆ ʻಕೌನ್ಸಿಲಿಂಗ್ʼ ಪ್ರಕ್ರಿಯೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ʻಮುಖ್ಯ ಶಿಕ್ಷಕʼರ ಹುದ್ದೆಗೆ ʻಕೌನ್ಸಿಲಿಂಗ್ʼ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ(HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-1ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.

ಆದರೆ ಪದವೀಧರ ಪ್ರಾಥಮಿಕ ಶಾಲಾ(ಜಿ.ಪಿ.ಟಿ) ಶಿಕ್ಷಕರು ಬಡ್ತಿ ಸಂಬಂಧ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾವೆ ಹೂಡಿದ್ದು ಅರ್ಜಿ ಸಂಖ್ಯೆ: 1134-1143/2022. ರ ನ್ಯಾಯಾಲಯದ ಅಂತಿಮ ತೀರ್ಪಿನಂತೆ ಹಾಗೂ ಉಲ್ಲೇಖಿತ-2ರ ಪುನರ್ ಪರಿಶೀಲನಾ ಅರ್ಜಿ ಸಂಖ್ಯೆ: 196-205/2023 ರ ಆದೇಶದಂತೆ ಮತ್ತು ಉಲ್ಲೇಖ-4 ರಲ್ಲಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ನಿಂದನಾ ದಾವೆ ಸಂಖ್ಯೆ: ಸಿ.ಟಿ.ಎ. 46-55/2024 ದಾಖಲಾಗಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಉಲ್ಲೇಖ-1ರ ವೇಳಾಪಟ್ಟಿಯ ಪ್ರಕಾರ ಮುಖ್ಯ ಶಿಕ್ಷಕರ ಮತ್ತು ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ನೀಡಬೇಕಾಗಿದ್ದ ಬಡ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶವದವರೆಗೂ ಮುಂದೂಡಲಾಗಿದೆ. ಸಕ್ಷಮ ಪ್ರಾಧಿಕಾರಿಗಳು ಇದನ್ನು ಗಮನಿಸಲು ಸೂಚಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...