ಬೆಂಗಳೂರು: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ಸಂರಕ್ಷಣೆಗೆ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಗಳನ್ನು ಸರ್ವೆ ಮಾಡಿ ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಮತ್ತು ಸಂರಕ್ಷಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಮತ್ತು ಅವಧಿ ಮುಗಿದ ನಂತರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೆ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ತೀರ್ಮಾನ ಕೈಗೊಳ್ಳಲಾಗಿದೆ.