alex Certify BIG NEWS: ಮತದಾರರ ಪಟ್ಟಿಯಲ್ಲಿ ಹೆಸರಿದ್ರೆ ಕೊರೋನಾ ಲಸಿಕೆ ಖಚಿತ, ಫಲಾನುಭವಿಗಳ ಆಯ್ಕೆಗೆ ಪಟ್ಟಿ ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾರರ ಪಟ್ಟಿಯಲ್ಲಿ ಹೆಸರಿದ್ರೆ ಕೊರೋನಾ ಲಸಿಕೆ ಖಚಿತ, ಫಲಾನುಭವಿಗಳ ಆಯ್ಕೆಗೆ ಪಟ್ಟಿ ಬಳಕೆ

ನವದೆಹಲಿ: ಇಂದಿನಿಂದ ದೇಶಾದ್ಯಂತ ಕೊರೋನಾ ಲಸಿಕೆ ನೀಡಲಿದ್ದು, ಫಲಾನುಭವಿಗಳ ಆಯ್ಕೆಗೆ ಮತದಾರರ ಪಟ್ಟಿ ಬಳಸಿಕೊಳ್ಳಲಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಮೂರು ಕೋಟಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು. 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಇದಕ್ಕಾಗಿ ಮತದಾರರ ಪಟ್ಟಿಯನ್ನು ಬಳಸಿಕೊಳ್ಳಲು ಚಿಂತನೆ ನಡೆಸಿದೆ.

ಕೇಂದ್ರ ಗೃಹ ಸಚಿವಾಲಯ ವತಿಯಿಂದ ನಿರ್ದಿಷ್ಟ ವಯೋಮಾನದವರ ಆಯ್ಕೆ ಮಾಡಲು ಮತದಾರರ ಪಟ್ಟಿಯಲ್ಲಿನ ಮಾಹಿತಿ ಒದಗಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. 50 ವರ್ಷ ಮೇಲ್ಪಟ್ಟ ಮತದಾರರ ಬಗ್ಗೆ ಮಾಹಿತಿ ಕೇಳಲಾಗಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸಿಬ್ಬಂದಿ, 50 ವರ್ಷ ಮೇಲ್ಪಟ್ಟವರು, 50 ವರ್ಷದೊಳಗಿನ ವಿವಿಧ ಕಾಯಿಲೆಯಿಂದ ಬಳಲುತ್ತಿರುವವರಿಗೆ ಆರಂಭಿಕ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ. 50 ವರ್ಷ ಮೇಲ್ಪಟ್ಟವರನ್ನು ಎರಡು ವರ್ಗೀಕರಣ ಮಾಡಲಾಗುವುದು. 50 ರಿಂದ 60 ವರ್ಷದ ಒಂದು ಗುಂಪು ಹಾಗೂ 60 ವರ್ಷ ಮೇಲ್ಪಟ್ಟವರ ಮತ್ತೊಂದು ಗುಂಪು ರಚಿಸಲಾಗುವುದು.

ಮತಗಟ್ಟೆ ಅನುಸಾರ ಪ್ರತಿ ಬೂತ್ ನಲ್ಲಿ 50 ವರ್ಷ ಮೇಲ್ಪಟ್ಟ ಎಷ್ಟು ವ್ಯಕ್ತಿಗಳು ಇದ್ದಾರೆ ಎಂಬುದನ್ನು ಮತದಾರರ ಪಟ್ಟಿ ಮಾಡಿ ಆಯ್ಕೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಬೂತ್ ವಾರು ಮತದಾರರ ಪಟ್ಟಿಯನ್ನು ಬಳಸಿಕೊಂಡು 50 ವರ್ಷ ಮೇಲ್ಪಟ್ಟ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...