ದಾರಿತಪ್ಪಿಸುವ ಜಾಹೀರಾತುಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಜಾಹೀರಾತು ನಿಯಮಗಳನ್ನು ಜಾರಿಗೆ ತಂದಿದ್ದು ಜೂನ್ 10 ರಿಂದಲೇ ಇದು ಜಾರಿಗೆ ಬಂದಿದೆ.
ಹೊಸ ನಿಯಮದ ಅನ್ವಯ ಸೆಲೆಬ್ರಿಟಿಗಳ ಜಾಹೀರಾತಿನಲ್ಲಿ ಪ್ರಾಮಾಣಿಕ ಅಭಿಪ್ರಾಯ, ನಂಬಿಕೆ ಇಲ್ಲದಿದ್ದರೆ ಅಂಥವರ ವಿರುದ್ಧ ಗ್ರಾಹಕರ ರಕ್ಷಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಿಯಮದಲ್ಲಿ ತಿಳಿಸಲಾಗಿದೆ.
ಈ ಮಾರ್ಗಸೂಚಿಯನ್ನು ಮೊದಲ ಬಾರಿಗೆ ಉಲ್ಲಂಘನೆ ಮಾಡಿದರೆ ಹತ್ತು ಲಕ್ಷ ರೂಪಾಯಿ ದಂಡ, ನಂತರದ ಪ್ರತಿ ಉಲ್ಲಂಘನೆಗೆ ತಲಾ 50 ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.