ಬೆಂಗಳೂರು : ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
ಹೌದು, ವಿಧಾನಸೌಧದ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.
ಕುಂದುಕೊರತೆ ಸಣ್ಣದು, ದೊಡ್ಡದೆಂಬ ಚಿಂತೆ ಬಿಡಿ, ಶೀಘ್ರ ಪರಿಹಾರಕ್ಕೆ ಅಹವಾಲುಗಳೊಂದಿಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಣೆ ಹೊರಡಿಸಿದ್ದಾರೆ.
ಜನಸ್ಪಂದನ ನಡೆಯುವ ದಿನಾಂಕ : ಫೆ.8 2024
ಸ್ಥಳ : ವಿಧಾಸೌಧದ ಮುಂಭಾಗ