alex Certify BIG NEWS : ‘3 ಡಿಸಿಎಂ ಹುದ್ದೆ ಸೃಷ್ಟಿ ಮಾಡದಿದ್ರೆ ಸರ್ಕಾರ ಉಳಿಯಲ್ಲ’ : ಸಚಿವ ಕೆ.ಎನ್ ರಾಜಣ್ಣ ಮತ್ತೊಂದು ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘3 ಡಿಸಿಎಂ ಹುದ್ದೆ ಸೃಷ್ಟಿ ಮಾಡದಿದ್ರೆ ಸರ್ಕಾರ ಉಳಿಯಲ್ಲ’ : ಸಚಿವ ಕೆ.ಎನ್ ರಾಜಣ್ಣ ಮತ್ತೊಂದು ಬಾಂಬ್

ಬೆಂಗಳೂರು : 3 ಡಿಸಿಎಂ ಹುದ್ದೆ ಸೃಷ್ಟಿಗೆ ಸಚಿವ ಕೆ.ಎನ್ ರಾಜಣ್ಣ ಪಟ್ಟು ಹಿಡಿದಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಡಿಸಿಎಂ ಹುದ್ದೆ ಸೃಷ್ಟಿ ಮಾಡದಿದ್ದರೆ ಸರ್ಕಾರ ಉಳಿಯಲ್ಲ’ ಎಂದು ಸಚಿವ ಕೆ.ಎನ್ ರಾಜಣ್ಣ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಗೆಲ್ಲಬೇಕಾದರೆ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಅನಿವಾರ್ಯವಾಗಿದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್. ರಾಜಣ್ಣ ಬಾಂಬ್ ಸಿಡಿಸಿದ್ದಾರೆ. ನಾನು ಯಾವುದೇ ದುರುದ್ದೇಶದಿಂದ ಈ ಹೇಳಿಕೆ ನೀಡುತ್ತಿಲ್ಲ, ಪಕ್ಷದ ಹಿತದೃಷ್ಟಿಯಿಂದ ಹೀಗೆ ಹೇಳಿಕೆ ನೀಡಿದ್ದೇನೆ ಎಂದರು.

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಕಾಳಗ ನಡೆಯುತ್ತಿದೆ. ರಾಜಣ್ಣ ಹೇಳಿಕೆ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಕೆಲವರು ಹೆಚ್ಚುವರಿ ಡಿಸಿಎಂ ಹುದ್ದೆ ಬೇಕು ಎಂದರೆ, ಇನ್ನೂ ಕೆಲವರು ಬೇಡ ಎನ್ನುತ್ತಿದ್ದಾರೆ.

ಮೂರು ಜನರನ್ನು ಉಪಮುಖ್ಯಮಂತ್ರಿ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾವು ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಇದಕ್ಕೆ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...