ಬೆಂಗಳೂರು: ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಮಹಿಳಾ ನೌಕರರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರೋಶಿನಿ ಗೌಡ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಂಘ ಸ್ಥಾಪನೆ ಮಾಡಲಾಗಿದೆ. 2.50 ಲಕ್ಷ ಸರ್ಕಾರಿ ಮಹಿಳಾ ನೌಕರರಿದ್ದು, ಸದಸ್ಯತ್ವ ಅಭಿಯಾನ ಆರಂಭಿಸಲಾಗುವುದು. ಉಚಿತ ಕಾನೂನು ನೆರವು, ನಿಯಮಗಳ ಬಗ್ಗೆ ತಿಳಿವಳಿಕೆ, ವಿಮೆ, ಉಳಿತಾಯ ಮತ್ತಿತರ ವಿಷಯಗಳ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಮಹಿಳಾ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ನಡೆಸಲಾಗುವುದು. ಸ್ವಸಹಾಯ ಗುಂಪುಗಳ ರಚನೆ, ಸಿ ಮತ್ತು ಡಿ ಚರ್ಚೆ ಮಹಿಳಾ ನೌಕರರ ಹೆಣ್ಣುಮಕ್ಕಳ ವ್ಯಾಸಂಗಕ್ಕಾಗಿ ಆರ್ಥಿಕ ನೆರವು, ಮಹಿಳಾ ನೌಕರರ ಸಮಸ್ಯೆಗಳಿಗೆ ಸಾಮೂಹಿಕ ವಿವಾಹ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.