alex Certify BIG NEWS : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಎಚ್ಚರಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಎಚ್ಚರಿಕೆ..!

ಬೆಂಗಳೂರು : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರದ ಕುರಿತು ಅವರು ಮಾತನಾಡಿದರು.
ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ ದುರುದ್ದೇಶ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸುವ ಕುತಂತ್ರ ನಡೆಸುತ್ತಿದೆ.ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಬಳಕೆ ದುರ್ಬಳಕೆ ಮಾಡಿಕೊಂಡಿದೆ.

ಬಿಜೆಪಿಗೆ ಜನ ಯಾವತ್ತೂ ಬಹುಮತ ನೀಡಿಲ್ಲ. ಸಿಎಂ ಆಗಿದ್ದಾಗ ಯಾರಾದರು ಜೈಲಿಗೆ ಹೋಗಿದ್ರೆ ಅದು ಯಡಿಯೂರಪ್ಪ ಎಂದು ಹೇಳಿದರು.ಕರ್ನಾಟಕದ ಜನ ಸುಮ್ನೆ ಕೂರಲ್ಲ. ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...