ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜಭವನದ ಚಲೋ ನಡೆಸಿದ್ದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಲರು ಅಚ್ಚರಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜಭವನ ಚಲೋ ಪ್ರತಿಭಟನೆ ಬಳಿಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಅನುಮತಿ ನೀಡುವಂತೆ ಕೇಳಿದ್ದಾರೆ. ಈ ವೇಳೆ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಾನು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿಯೇ ಇಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ನಾನು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಕೇವಲ ತನಿಖೆಗೆ ಸೂಚಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿಲ್ಲ.