ಬೆಂಗಳೂರು: ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶಿಸಿದ್ದಾರೆ.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಗೆ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. ಕೆ.ಎಂ. ಮೇತ್ರಿ ಅವರನ್ನು ನೇಮಕ ಮಾಡಲಾಗಿದೆ.
ಬಾಗಲಕೋಟೆ ತೋಟಗಾರಿಕೆ ವಿವಿಗೆ ಮೈಸೂರು ತೋಟಗಾರಿಕೆ ಕಾಲೇಜಿನ ಡೀನ್ ಡಾ. ವಿಷ್ಣುವರ್ಧನ್ ಅವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾಲಯಕ್ಕೆ ಅದೇ ವಿವಿಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿರುವ ಪ್ರೊ. ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಲಾಗಿದೆ.