
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಇದೀಗ ಮತ್ತೆ ಎರಡು ವಿಧೇಯಕಗಳನ್ನು ಸಹಿ ಮಾಡದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಾಸ್ ಕಳುಹಿಸಿದ್ದಾರೆ.
ಕೆಲ ದಿನಗಳ ಹಿಂದೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ನ್ನು ಸಹಿ ಮಡದೇ ಹಿಂತಿರುಗಿಸಿದ್ದ ರಾಜ್ಯಪಾಲರು ಇದೀಗ ಮತ್ತೆ ಎರಡು ಮಸೂದೆ ವಪಾಸ್ ಕಳುಹಿಸಿದ್ದಾರೆ.
ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ವಿದೇಸ್ಯಕ-2024 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ-2024 ಈ ಎರಡೂ ಮಸೂದೆಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಈ ಮಸೂದೆಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.
ಸಹಕಾರಿ ಸಂಘಗಳ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೇಳಿ ರಾಜ್ಯಪಾಲರು ಮಸೂದೆ ವಾಪಾಸ್ ಕಳುಹಿಸಿದ್ದಾರೆ.