ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ ಎನ್ನಲಾಗಿದೆ.
ಹೌದು. ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾವೇರಿ ನಿವಾಸದಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.