ಬೆಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯಪಾಲರ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ತಜ್ಞರ ಸಲಹೆ ಪಡೆದು ನಂತರ ಈ ತೀರ್ಮಾನ ಕೈಗೊಂಡಿದ್ದಾರೆ.ರಾಜ್ಯಪಾಲರ ಆದೇಶದ ಬಗ್ಗೆ ಎರಡು ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮೊದಲು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕಾ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾ? ಎಂಬ ಬಗ್ಗೆ ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಿದ್ದರು.ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ.