ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ತಪ್ಪು. ಯಾರೂ ಕೂಡ ಈ ರೀತಿ ನಡೆದುಕೊಳ್ಳಬಾರದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಅವರು, ನಾವು ಕೂಡ ಜವಾಬ್ದಾರಿಯಿಂದ ಮಾತನಾಡಬೇಕು. ಇಂತಹ ಸ್ಥಿತಿ ಏಕೆ ಬಂತು ಎಂದು ಅರ್ಥ ಮಾಡಿಕೊಳ್ಳಬೇಕು. ಮೊಟ್ಟೆ ಎಸೆದಿರುವುದು ತಪ್ಪು. ಸಾವರ್ಕರ್ ವಿರುದ್ಧ ಮಾತನಾಡಿದ್ದು ಕೂಡ ತಪ್ಪು ಎಂದರು.
ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಪಕ್ಷ ಮೂರು ಭಾಗವಾಗಿದೆ. ಯಾರಿಗೂ ಹೆದರಬೇಕಿಲ್ಲ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಚಿವ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.