alex Certify ‘ಮೇಕೆದಾಟು’ ಕಾಂಗ್ರೆಸ್ ಪಾದಯಾತ್ರೆ ಹೊತ್ತಲ್ಲೇ ಸಚಿವ ಕಾರಜೋಳ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೇಕೆದಾಟು’ ಕಾಂಗ್ರೆಸ್ ಪಾದಯಾತ್ರೆ ಹೊತ್ತಲ್ಲೇ ಸಚಿವ ಕಾರಜೋಳ ಬಾಂಬ್

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ರಾಜಕೀಯ ಪ್ರೇರಿತ ಎಂದು ಬಿಜೆಪಿ ಟೀಕಿಸಿದೆ. ಇದೇ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹೊಣೆಗೇಡಿತನದ ಸಾಕ್ಷ್ಯಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆ ಬಗ್ಗೆ ಹೊಣೆಗೇಡಿತನ ತೋರಿಸಿದ ಸಾಕ್ಷ್ಯಗಳು ನಮ್ಮಲ್ಲಿದ್ದು, ಕೆಲವೇ ದಿನಗಳಲ್ಲಿ ಕೆಲವು ಸ್ಪೋಟಕ ಮಾಹಿತಿಗಳನ್ನು ಹೊರಹಾಕುತ್ತೇನೆ. ರಾಜಕೀಯಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಗಿದೆ. ಅಧಿಕಾರದಲ್ಲಿದ್ದಾಗ ನಿರ್ಲಕ್ಷಿಸುವುದು, ಕಡತ ವಿಲೇವಾರಿ ಮಾಡದೆ ಕಾಲಹರಣ ಮಾಡುವುದು, ವಿಪಕ್ಷದಲ್ಲಿದ್ದಾಗ ಪಾದಯಾತ್ರೆ ಮಾಡುವುದು ಕಾಂಗ್ರೆಸ್ ಜಾಯಮಾನವಾಗಿದೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...